ಇನ್ನು ದಿನಸಿ , ತರಕಾರಿ ವ್ಯಾಪಾರಿಗಳಿಗೆ ಕೊರೊನಾ ಪರೀಕ್ಷೆ

ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸೂಚನೆ 

ದಿಲ್ಲಿ, ಆ. 8:ದೇಶದಲ್ಲಿ ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ  ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ದೇಶಾದ್ಯಂತ ದಿನಬಳಕೆ ವಸ್ತುಗಳ ವ್ಯಾಪಾರಿಗಳು, ದಿನಸಿ ಮತ್ತು ತರಕಾರಿ ವ್ಯಾಪಾರಿಗಳ ಮುಖಾಂತರ ಸೋಂಕು ಪ್ರಸರಣದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದು, ಇದೇ ಕಾರಣಕ್ಕೆ ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೊನಾ  ಪರೀಕ್ಷೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳ ಮೂಲಕ ಕೋವಿಡ್ ಸೋಂಕು ಹರಡುವ ಸಂಭಾವ್ಯರಾಗಿರುವ ಕಾರಣ, ಅವರಿಗೆಲ್ಲರಿಗೂ ಕೊರೊನಾ ಟೆಸ್ಟ್ ಮಾಡಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ.

ಕೊರೊನಾ ಸೋಂಕಿತರನ್ನು ಕರೆದೊಯ್ಯಲು ಅನುಕೂಲವಾಗುವಂತೆ ಸುಸಜ್ಜಿತ ಆಂಬುಲೆನ್ಸ್ ಸೌಲಭ್ಯ ನಿಗದಿಪಡಿಸಬೇಕು. ತುರ್ತು ಕರೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಸೂಚಿಸಿದ್ದಾರೆ. ಕೊರೊನಾ ಈಗ ಹೊಸ ಪ್ರದೇಶಗಳಿಗೆ ಹರಡುತ್ತಿದೆ. ಹೀಗಾಗಿ ಆರಂಭದಲ್ಲಿಯೇ ಸೋಂಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುವ ಮೂಲಕ ಕೊರೊನಾ ಸೋಂಕಿನ ಪ್ರಕರಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ.

 error: Content is protected !!
Scroll to Top