ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಪೊಸಿಟಿವ್‌

ಬೆಂಗಳೂರು, ಆ. 9:ಕೊರೊನಾ ವೈರಸ್‌ ರಾಜ್ಯದ ಆರೋಗ್ಯ ಸಚಿವರನ್ನೂ ಬಿಟ್ಟಿಲ್ಲ.  ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು  ತಗಲಿರುವುದು ದೃಢಪಟ್ಟಿದೆ.  ಸ್ವತಃ ಶ್ರೀರಾಮುಲು ಅವರೇ  ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಅವರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪೊಸಿಟಿವ್ ಬಂದಿದೆ ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವ ಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ತಿಳಿಸಿದ್ದಾರೆ.

 





































error: Content is protected !!
Scroll to Top