ವಿಜಯವಾಡ : ಕೋವಿಡ್ ಕೇರ್ ಸೆಂಟರ್ ಆಗಿದ್ದ ವಿಜಯವಾಡದ ಹೋಟೆಲ್ವೊಂದರಲ್ಲಿ ಅಗ್ನಿ ಅವಗಢ ಸಂಭವಿಸಿ 7 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಅನೇಕ ಮಂದಿ ಹೋಟೆಲ್ನಲ್ಲಿಯೇ ಸಿಲುಕಿರುವ ಮಾಹಿತಿ ಇದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅನೇಕ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಅವಘಡದಲ್ಲಿ ಏಳು ಮಂದಿ ದಾರುಣವಾಗಿ ಸಾವಿಗೀಡಾಗಿದ್ದು, ಈವರೆಗೆ 30 ಮಂದಿಯನ್ನು ರಕ್ಷಿಸಲಾಗಿದೆ.
