ಬಿಜೆಪಿ ನಾಯಕನ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರ, ಆ. 9:  ಜಮ್ಮು-ಕಾಶ್ಮೀರದ ಬುದ್ಗಾಂವ್‌  ಜಿಲ್ಲೆಯ ಬಿಜೆಪಿಯ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿದ್ದು,  ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಶ್ಮೀರದಲ್ಲಿ ಈಗ ಉಗ್ರರು ರಾಜಕೀಯ ನಾಯಕರನ್ನು ಗುರಿ  ಮಾಡಿಕೊಂಡು  ದಾಳಿ ಮಾಡುತ್ತಿದ್ದಾರೆ. ಅದರಲ್ಲೂ ಬಿಜೆಪಿಯ ಪದಾಧಿಕಾರಿಗಳನ್ನು ಗುರಿ ಮಾಡಿಕೊಂಡಿದ್ದಾರೆ.

ಇನ್ನೊಂದೆಡೆ ಮತ್ತೆ ಪಾಕಿಸ್ಥಾನ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಕೊಟೆ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿದೆ. ಅದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತೀಯ ಸೇನೆ ನೀಡಿದೆ ಎಂದು ತಿಳಿದುಬಂದಿದೆ.

 error: Content is protected !!
Scroll to Top