ಮಲೆ ಕುಡಿಯ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಬಿಡುಗಡೆ : ಸುನಿಲ್‌ ಕುಮಾರ್‌

ಕಾರ್ಕಳ : ಜಿಲ್ಲಾ ಮಲೆಕುಡಿಯ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಸರಕಾರದಿಂದ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದರು.

ಆ. 9ರಂದು ಶಾಸಕರ ಕಚೇರಿಯಲ್ಲಿ ನಡೆದ ಮಲೆಕುಡಿಯ ಸಮಾಜ ಬಾಂಧವರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಶಾಸಕರು, ಸಂಘದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ನಡೆಸುವ ಸಲುವಾಗಿ ತಾಲೂಕಿನ ಮಾಳದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. ಇದರಿಂದ ಮಲೆಕುಡಿಯ ಸಮಾಜ ಬಾಂಧವರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಜಿಲ್ಲಾ ಮಲೆಕುಡಿಯ ಸಂಘದ ಮನವಿ ಮೇರೆಗೆ ಸರಕಾರದ ಮೇಲೆ ಒತ್ತಡ ಹೇರಿ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಬಿಡುಗಡೆಗೊಳಿಸಲಾಗಿದ್ದು, ಒಂದು ವರ್ಷದೊಳಗೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಯೋಜನೆ ರೂಪಿಸಲಾಗಿದೆ .

ವಿ. ಸುನಿಲ್ ಕುಮಾರ್‌ , ಶಾಸಕರು

ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಮಾತನಾಡಿ, ಸಂಘದ ಬೇಡಿಕೆಗೆ ಸ್ಪಂದಿಸಿ, ಶಾಸಕ ಸುನಿಲ್‌ ಕುಮಾರ್‌ ಅವರು ಅನುದಾನ ಒದಗಿಸಿಕೊಟ್ಟಿರುವುದು ಸಮುದಾಯಕ್ಕೆ ಸಂತಸ ತಂದಿದೆ ಎಂದರು. ಅನುದಾನ ಬಿಡುಗಡೆಯ ಆದೇಶ ಪ್ರತಿಯನ್ನು ಶಾಸಕರು ಸಂಘದ ಜಿಲ್ಲಾಧ್ಯಕ್ಷ ಮಂಜಪ್ಪ ಗೌಡ ಅವರಿಗೆಇದೇ ಸಂದರ್ಭದಲ್ಲಿ ಹಸ್ತಾಂತರಿಸಿದರು.
ರಾಜ್ಯ ಮಲೆಕುಡಿಯ ಸಂಘದ ಗೌರವ ಸಲಹೆಗಾರ ನೋನಯ್ಯ ಗೌಡ ರೆಂಜಾಳ, ಜಿಲ್ಲಾ ಮಲೆಕುಡಿಯ ಸಂಘದ ಉಪಾಧ್ಯಕ್ಷ ಸುಂದರ ಗೌಡ ಮುದ್ರಾಡಿ, ಗೋಪಾಲ್ ಗೌಡ ಮಾಳ, ಪೂರ್ವ ಜಿಲ್ಲಾಧ್ಯಕ್ಷ ಸುಧಾಕರ ಗೌಡ ನಾಡ್ಪಾಲು, ಹೆಬ್ರಿ ತಾಲೂಕು ಸಮಿತಿಯ ಅಧ್ಯಕ್ಷ ಉದಯ್ ಗೌಡ ಬಲ್ಲಾಡಿ, ಕಾರ್ಕಳ ತಾಲೂಕು ಸಮಿತಿ ಅಧ್ಯಕ್ಷ ಶೇಖರ್ ಗೌಡ ಮಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಮಲೆಕುಡಿಯ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಜಿಲ್ಲಾ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಸಾಧು ಗೌಡ ನಾರ್ಜೆ, ಕೋಶಾಧಿಕಾರಿ ವಿಷ್ಣುಮೂರ್ತಿ ಕೆರ್ವಾಶೆ, ಸಹ ಕಾರ್ಯದರ್ಶಿ ಕಾವ್ಯ ಶಿರ್ಲಾಲು, ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಗೌಡ ಅಂಡಾರು, ವಕ್ತಾರ ಸುಂದರ ಗೌಡ ರೆಂಜಾಳ, ಕಾರ್ಕಳ ತಾಲೂಕು ಸಮಿತಿ ಗೌರವ ಸಲಹೆಗಾರ ಗೋವಿಂದ ಗೌಡ ಮಾಳ, ಉಪಾಧ್ಯಕ್ಷ ಡೀಕಯ್ಯ ಗೌಡ ಕನ್ಯಾಲು, ಪ್ರಧಾನ ಕಾರ್ಯದರ್ಶಿ ಅಶೋಕ ಗೌಡ ಕೆರ್ವಾಶೆ, ನಾನಾ ಗ್ರಾಮ ಸಮಿತಿಯ ಪದಾಧಿಕಾರಿಗಳು ಹಾಗೂ ಮಾಜಿ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರುಗಳು, ಸಮಾಜದ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡರು.

ರಾಜ್ಯ ಮಲೆಕುಡಿಯ ಸಂಘದ ಸಂಘಟನಾ ಕಾರ್ಯದರ್ಶಿ ಗಂಗಾಧರ ಗೌಡ ಈದು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ರಾಜ್ಯ ಮಲೆಕುಡಿಯ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪ್ರಶಾಂತ್ ಹೆರ್ಮುಂಡೆ ವಂದಿಸಿದರು.

 







































error: Content is protected !!
Scroll to Top