ದಿಲ್ಲಿ, ಆ. 10: ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿಯವರೂ ಕೊರೊನಾ ಸೋಂಕಿಗೊಳಗಾಗಿದ್ದಾರೆ.
ಈ ಕುರಿತು ಸ್ವತಃ ಪ್ರಣಬ್ ಮುಖರ್ಜಿಯವರೇ ಟ್ವೀಟ್ ಮಾಡಿದ್ದು, ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿ ಕ್ವಾರಂಟೈನ್ ಒಳಗಾಗಬೇಕೆಂದು ಮನವಿ ಮಾಡಿಕೊಂಡಿದ್ದಾರೆ.