SSLC ಫಲಿತಾಂಶ: ಜಿಲ್ಲೆಯಲ್ಲಿ ಅಗ್ರಸ್ಥಾನಿಗಳಾದ SC/ST ಮಕ್ಕಳಿಗೆ ಸಿಗಲಿದೆ 1 ಲ.ರೂ. ಬಹುಮಾನ

0
ಪ್ರಾತಿನಿಧಿಕ ಚಿತ್ರ

ಬೆಂಗಳೂರು, ಆ. 10: ಕೊರೊನಾ ಕಾಟದ ನಡುವೆಯೇ  ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಅಪರಾಹ್ನ 3 ಗಂಟೆಗೆ ಇಲಾಖೆ ವೆಬ್‍ಸೈಟ್‍ನಲ್ಲಿ   ಪ್ರಕಟಗೊಳ್ಳಲಿದೆ.

ಅಧಿಕೃತವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಘೋಷಣೆ ಮಾಡಲಿದ್ದಾರೆ. www.kseeb.kar.nic.in ಮತ್ತು www.karresults.nic.in ವೆಬ್‍ಸೈಟ್‍ಗಳಲ್ಲಿ ಫಲಿತಾಂಶವನ್ನು ನೋಡಬಹುದು.

ಪ್ರತಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 1ಲ.ರೂ. ನಗದು ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಅವರ ಹೆಸರಿನಲ್ಲಿ ಈ ನಗದು ಬಹುಮಾನವನ್ನು ನೀಡಲಾಗುತ್ತದೆ.  ಈ ಉದ್ದೇಶಕ್ಕಾಗಿ 2020-21ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 60 ಲಕ್ಷ ರೂ. ಗಳನ್ನು ನಿಗದಿಪಡಿಸಲಾಗಿದೆ.

 

Previous articleಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆ
Next articleಶಿಕ್ಷಣ ವ್ಯವಸ್ಥೆಯ ದೋಷದಲ್ಲಿ ಎಲ್ಲರ ಪಾಲೂ ಇದೆ

LEAVE A REPLY

Please enter your comment!
Please enter your name here