ಕಾರ್ಕಳ : ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರ ಸತತ 6ನೇ ಬಾರಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ. ಶ್ರೀಲಕ್ಷ್ಮಿ ಪಿ. ನಾಯಕ್ 623 ಅಂಕ ಪಡೆಯುವುದರೊಂದಿಗೆ ರಾಜ್ಯಕ್ಕೆ ತೃತೀಯಾ ಸ್ಥಾನ ಪಡೆದಿದ್ದಾರೆ. ಅಖಿಲ್ ಯು. ವಾಗ್ಲೆ 620 ಅಂಕಗಳೊಂದಿಗೆ ಸಂಸ್ಥೆಗೆ ದ್ವಿತೀಯ ಸ್ಥಾನ ಪಡೆದರೆ, ಅನೀಶ್ ಜೋಶಿ, ಆಸ್ತಾ ಲೋಂಡೆ 619 ಅಂಕಗಳೊಂದಿಗೆ ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ. ಪರೀಕ್ಷೆಗೆ ಹಾಜರಾದ 98 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು 600 ಕ್ಕೂ ಹೆಚ್ಚು ಅಂಕ ಗಳಿಸಿದ್ದು, 6 ವಿದ್ಯಾರ್ಥಿಗಳು ಶೇ. 98 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ. 62 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.