ಕೊರೊನಾ : ಹತ್ತು ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಂವಾದ

ದಿಲ್ಲಿ, ಆ. 11: ಕೊರೊನಾ ಪರಿಸ್ಥಿತಿಗೆ ಸಂಬಂಧಪಟ್ಟಂತೆ  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹತ್ತು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಹನ ನಡೆಸಿದರು. ದೇಶದಲ್ಲಿ ಕೊರೊನಾ ಪಿಡುಗಿನ  ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಯಲು ಮುಂದೆ ಕೈಗೊಳ್ಳಬೇಕಾದ ಕ್ರಮಗಳನ್ನು ಪರಿಶೀಲಿಸಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ  ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಭೆ ನಡೆಸಿದ್ದಾರೆ. ಅವರು ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ ಮತ್ತು ಉತ್ತರ ಪ್ರದೇಶದ ಸಿಎಂಗಳೊಂದಿಗೆ ಸಂವಹನ ನಡೆಸಿದರು.

ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಉಪಸ್ಥಿತರಿದ್ದರು. ಈ 10 ರಾಜ್ಯಗಳು ಹೆಚ್ಚಿನ ಜನಸಂಖ್ಯಾ ಸಾಂದ್ರತೆಯನ್ನು ಹೊಂದಿರುವುದರಿಂದ ಸಭೆಯು ಮಹತ್ವವನ್ನು ಪಡೆದುಕೊಂಡಿದೆ. ಸಾಂಕ್ರಾಮಿಕ ರೋಗ ಹರಡಿದ ನಂತರ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಮಂತ್ರಿಯ ಏಳನೇ ವಿಡಿಯೋ ಕಾನ್ಫರೆನ್ಸ್ ಸಭೆ ಇದಾಗಿದೆ.

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿನ ಅನ್ಲಾಕ್ 3.0 ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿಯವರ ಮೊದಲ ಸಭೆ ಇದಾಗಿದೆ.

ಕೋವಿಡ್ ಸಾಂಕ್ರಾಮಿಕ ರೋಗದ ಪ್ರಕರಣದಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತವು ಮಂಗಳವಾರ 53,601 ಕರೋನವೈರಸ್ ಪ್ರಕರಣಗಳ ಹೆಚ್ಚಳವನ್ನು ದಾಖಲಿಸಿದ್ದು, ಒಟ್ಟು ಸಂಖ್ಯೆ 22,68,675 ಕ್ಕೆ ಏರಿದೆ. ಒಂದೇ ದಿನದಲ್ಲಿ ದೇಶವು 871 ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.error: Content is protected !!
Scroll to Top