ಕಾರ್ಕಳ : ಈ ಬಾರಿಯ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕಾರ್ಕಳದ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.97.82 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 46 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. 21 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗೊಂಡಿದ್ದು, ಪೂರ್ವಿ ಯು. ಎಸ್. 603 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಮತ್ತು ಹಿಬಾ ಸುಲ್ತಾನ 601 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
