ಒಂದೇ ದಿನ 60,963 ಮಂದಿಗೆ ಕೊರೊನಾ ಸೋಂಕು

0

ದಿಲ್ಲಿ, ಆ. 12:  ದೇಶದಲ್ಲಿ ಒಂದೇ ದಿನ 60,963 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 23,29,639ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 834 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 46091ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದೇ ವೇಳೆ 23,29,639 ಮಂದಿ ಸೋಂಕಿತರ ಪೈಕಿ 16,39,600 ಮಂದಿ ಗುಣಮುಖರಾಗಿದ್ದು, 643948 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಮಾರಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 7,33,439 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

 ---
Previous articleಸಂಜಯ್ ದತ್ತ್ ಗೆ ಶ್ವಾಸಕೋಶದ ಕ್ಯಾನ್ಸರ್
Next articleಡಿ.ಜೆ.ಹಳ್ಳಿ ಗಲಭೆ : ಇಂದು ಸಂಜೆ ಸಿಎಂ ಮಹತ್ವದ ಸಭೆ; ಸಿಐಡಿ ತನಿಖೆ ಸಾಧ್ಯತೆ

LEAVE A REPLY

Please enter your comment!
Please enter your name here