ಗುರುವಾರ ಪಾರದರ್ಶಕ ತೆರಿಗೆ – ಪ್ರಾಮಾಣಿಕರನ್ನು ಗೌರವಿಸುವುದು ವೇದಿಕೆ ಉದ್ಘಾಟನೆ

ದಿಲ್ಲಿ, ಆ. 12: ಪ್ರಾಮಾಣಿಕವಾಗಿ ತೆರಿಗೆ ಪಾವತಿಸುವವರನ್ನು ಗೌರವಿಸುವ ಸಲುವಾಗಿ ಮತ್ತು  ನೇರ ತೆರಿಗೆ ಸುಧಾರಣೆಗಳ ಪ್ರಕ್ರಿಯೆಯನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಾರದರ್ಶಕ ತೆರಿಗೆ – ಪ್ರಾಮಾಣಿಕರನ್ನು ಗೌರವಿಸುವುದು ವೇದಿಕೆಯನ್ನು ಪ್ರಾರಂಭಿಸಲಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್,  ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಉಪಸ್ಥಿತರಿರಲಿದ್ದಾರೆ.

 error: Content is protected !!
Scroll to Top