
ದಿಲ್ಲಿ, ಆ. 13: ಕೊರೊನಾ ಸಾವಿನ ಸಂಖ್ಯೆಯಲ್ಲಿ ದೇಶ ಬ್ರಿಟನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದೆ. ಬುಧವಾರ ಒಂದೇ ದಿನ ದೇಶದಲ್ಲಿ 942 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಮಾರಕ ವೈರಸ್‌ಗೆ ಬಲಿಯಾದವರ 47,000 ದಾಟಿದೆ.
ಸಾವಿನ ಸಂಖ್ಯೆಯಲ್ಲಿ ಬ್ರಿಟನ್ , ಅಮೆರಿಕ , ಬ್ರೆಜಿಲ್ ಹಾಗೂ ಮೆಕ್ಸಿಕೊ ಬಳಿಕದ ಸ್ಥಾನದಲ್ಲಿ ಈಗ ಭಾರತವಿದೆ. ದೇಶದಲ್ಲಿ ಇಷ್ಟರ ತನಕ 47,033 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.
ಇದೇ ವೇಳೆ ವೈರಸ್ ಪ್ರಕರಣಗಳು ಮತ್ತೊಮ್ಮೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರ ಒಂದೇ ದಿನ ದೇಶದಲ್ಲಿ 66,999 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದೆ.
23,96,638 ಮಂದಿ ಸೋಂಕಿತರ ಪೈಕಿ 16,95,982 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶಲ್ಲಿ ಇನ್ನೂ 6,53,622 ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 8,30,391 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 2,68,45,688 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 12ರವರೆಗೂ 8,30,391 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.