ಅಯೋಧ್ಯೆ ಭೂಮಿಪೂಜೆಯಲ್ಲಿ ಭಾಗವಹಿಸಿದವರಿಗೆ ಆತಂಕ
ದಿಲ್ಲಿ, ಆ. 13 : ಅಯೋಧ್ಯೆಯಲ್ಲಿ ಆ.5 ರಂದು ನಡೆದ ರಾಮಮಂದಿರ ಭೂಮಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಅಯೋಧ್ಯೆಯ ರಾಮ ಜನಮಭೂಮಿ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಮಹಾಂತರೊಂದಿಗೆ ವೇದಿಕೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋಪಾಲ್ ದಾಸ್ ಅವರ ಆರೋಗ್ಯ ಸ್ಥಿತಿಯ ವಿವರಗಳನ್ನು ತೆಗೆದುಕೊಂಡಿದ್ದಾರೆ.