
ದಿಲ್ಲಿ, ಆ. 13: ಮಾಜಿ ರಾಷದ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಅವರು ಕೋಮಾಕ್ಕೆ ಜಾರಿದ್ದಾರೆ. ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಅವರನ್ನು ಇಡಲಾಗಿದೆ. ಕೋಮಾ ಸ್ಥಿತಿಯಲ್ಲಿದ್ದರೂ ಅವರ ಪ್ರಮುಖ ಅವ್ವಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಸೋಮವಾರ ಮನೆಯಲ್ಲಿ ಬಿದ್ದು ಗಾಯಗೊಂಡ ಬಳಿಕ ಅವರನ್ನು ಆರ್ & ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಮಿದುಳಿನ ಶಸ್ತ್ರಕ್ರಿಯೆ ಮಾಡಲಾಗಿದೆ. ಈ ನಡುವೆ ಅವರಲ್ಲಿ ಕೊರೊನಾ ಪೊಸಿಟಿವ್ ದೃಢವಾಗಿದೆ.
ಈ ನಡುವೆ ಇಂದು ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಮುಖರ್ಜಿ ನಿಧನರಾಗಿದ್ದಾರೆಂಬ ಸುದ್ದಿ ಹರಿದಾಡಿತು. ಈ ಸುದ್ದಿಯನ್ನು ಮುಖರ್ಜಿಯವರ ಪುತ್ರಿ ಶರ್ಮಿಷ್ಠಾ ಅವರೇ ಅಲ್ಲಗಳೆದಿದ್ದಾರೆ.