
ಮಂಗಳೂರು,ಆ. 13 :ಬೆಂಗಳೂರು ಗಲಭೆಯ ಹಿನ್ನೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳನ್ನು ಹರಿಯ ಬಿಡುತ್ತಿರುವ ಪ್ರಕರಣಗಳು ಮಂಗಳೂರು ನಗರದಲ್ಲಿ ವರದಿಯಾಗಿದೆ. ಈ ಕುರಿತು ಪೊಲೀಸ್ ಇಲಾಖೆ ಗಮನ ಹರಿಸಿದ್ದು, ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಇತರೆ ಯಾವುದೇ ಮತ ಧಾರ್ಮಿಕ ವಿಚಾರಗಳಿಗೆ ಸಂಬಂಧ ಪಟ್ಟಂತೆ ಯಾವುದೇ ವ್ಯಕ್ತಿಗಳು ಧಾರ್ಮಿಕ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದಾಗಲಿ, ಹಂಚಿಕೊಳ್ಳುವುದಾಗಲಿ ಮತ್ತು ಅಭಿಪ್ರಾಯ ವ್ಯಕ್ತ ಪಡಿಸುವುದು ಹಾಗೂ ಟೀಕೆ ಮಾಡುವುದಾಗಲಿ ಕಂಡು ಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.