ಬೆಂಗಳೂರು ಗಲಭೆ: ಕಾರ್ಪೋರೇಟರ್‌ ಪತಿ ಸೇರಿ 206 ಬಂಧನ

0

ಬೆಂಗಳೂರು, ಆ. 14: ನಗರದ   ಡಿ.ಜೆ. ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 206 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಬಿಬಿಎಂಪಿ ಕಾರ್ಪೊರೇಟರ್ ಇರ್ಶಾದ್ ಬೇಗಮ್ ಪತಿ ಕಲೀಂ ಪಾಶಾ ಕೂಡ ಸೇರಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ (ಜಂಟಿ) ಸಂದೀಪ್ ಪಾಟೀಲ್ ತಿಳಿಸಿದ್ದಾರೆ.ನಿನ್ನೆಯಿಂದೀಚೆಗೆ 60 ಮಂದಿಯನ್ನು ಬಂಧಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 206ಕ್ಕೇರಿತು.

ಸುದ್ದಿಗಾರರೊಂದಿಗೆ ಮಾತನಾಡಿರುವ ಸಂದೀಪ್ ಪಾಟೀಲ್ ಅವರು, ನಾಗವಾರ ವಾರ್ಡ್ ಬಿಬಿಎಂಪಿ ಕಾರ್ಪೊರೇಟರ್ ಇರ್ಶಾದ್ ಬೇಗಂ ಅವರ ಪತಿ ಕಲೀಂ ಪಾಷಾ ಸೇರಿದಂತೆ 60 ಮಂದಿಯನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಈವರೆಗೂ ಒಟ್ಟಾರೆ 206 ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಶಕ್ಕೆ ಪಡೆದಿರುವ ಪ್ರತಿ  ಆರೋಪಿಯನ್ನೂ ಪ್ರತ್ಯೇಕವಾಗಿ ವಿಚಾರಣೆಗೊಳಪಡಿಸಿ, ಗಲಭೆಯಲ್ಲಿ ಪಾತ್ರದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಮಹಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.

ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಮುಸ್ಲಿಮರ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿತ್ತು.

 ---
Previous articleಸಾಣೂರು : ಮರಕ್ಕೆ ಕಾರು ಢಿಕ್ಕಿ ಹೊಡೆದು ಇಬ್ಬರಿಗೆ ಗಾಯ
Next articleಜೇಸಿಐ ಹಾಗೂ ಜೇಸಿರೇಟ್‌ ವಿಭಾಗದಿಂದ ನೆರವು

LEAVE A REPLY

Please enter your comment!
Please enter your name here