ದಿಲ್ಲಿ, ಆ. 14 : ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಆ. 16ರಿಂದ ಮರಳಿ ಪ್ರಾರಂಭವಾಗಲಿದೆ.
ಸುಮಾರು ಐದು ತಿಂಗಳ ನಂತರ ವೈಷ್ಣೋದೇವಿಮ ಯಾತ್ರೆ ಆರಂಭವಾಗಲಿದ್ದು, ಈಗಾಗಲೇ ಸಿದ್ಧತೆಗಳು ಪ್ರಾರಂಭವಾಗಿವೆ ಎಂದು ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿ ತಿಳಿಸಿದೆ. ದೇವಾಲಯದ ಆವರಣವನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುತ್ತಿದೆ ಕೊರೊನಾ ನಿಯಮಾಳಿಗಳನ್ನು ಪಾಲಿಸಿಕೊಂಡು ಯಾತ್ರೆಗೆ ಅವಕಾಶ ಕಲ್ಪಿಸಲಾಗುವುದು.
ಆದರೆ, ಧಾರ್ಮಿಕ ಮೆರವಣಿಗೆಗಳು ಮತ್ತು ದೊಡ್ಡ ಧಾರ್ಮಿಕ ಕೂಟಗಳನ್ನು ನಿಷೇಧಿಸಲಾಗಿದೆ.
ಯಾತ್ರಾರ್ಥಿಗಳಿಗೆ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. ಸೆಪ್ಟೆಂಬರ್ 30 ರವರೆಗೆ ದಿನಕ್ಕೆ ಗರಿಷ್ಠ 5,000 ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶ ಇರುತ್ತದೆ. ಕೌಂಟರ್‌ಗಳಲ್ಲಿ ಜನದಟ್ಟಣೆ ತಪ್ಪಿಸುವ ಸಲುವಾಗಿ ಆನ್‌ಲೈನ್ ಮೂಲಕ ಮಾತ್ರ ನೋಂದಣಿಯನ್ನು ಮುಂಚಿತವಾಗಿ ಮಾಡಲು ಸೂಚಿಸಲಾಗಿದೆ.