ಜ್ಞಾನಸುಧಾ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

0

ಕಾರ್ಕಳ : ಜ್ಞಾನಸುಧಾ ಶಿಕ್ಷಣ ಸಂಸ್ಥೆ ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡುತ್ತಿವೆ. ಕರ್ನಾಟಕದ ವಿವಿಧ ಮೂಲೆಗಳಿಂದ ಬಂದಂತಹ ವಿದ್ಯಾರ್ಥಿಗಳು ಇಲ್ಲಿ ಉತ್ತಮ ಶಿಕ್ಷಣ ಪಡೆಯುತ್ತಿದ್ದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಆ. 14ರಂದು ಜ್ಞಾನಸುಧಾ ಸಂಸ್ಥೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕಗಳಿಸಿದ 14 ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಬಳಿಕ ಮಾತನಾಡಿದರು.

ತಾಲೂಕಿನ 41 ವಿದ್ಯಾರ್ಥಿಗಳಿಗೆ 600ಕ್ಕೂ ಅಧಿಕ ಅಂಕ

ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್‌. ಅವರು ಮಾತನಾಡಿ, ಕಾರ್ಕಳ ತಾಲೂಕಿನಲ್ಲಿ ಒಟ್ಟು 14 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದಿರುತ್ತಾರೆ. ಅವರಲ್ಲಿ 14 ವಿದ್ಯಾರ್ಥಿಗಳು ಜ್ಞಾನಸುಧಾ ಸಂಸ್ಥೆಯ ವಿದ್ಯಾರ್ಥಿಗಳು. ಈ ಸಂಸ್ಥೆಯ ಫಲಿತಾಂಶ ನಮ್ಮ ತಾಲೂಕಿನ ಒಟ್ಟು ಫಲಿತಾಂಶದ ಮೇಲೆ ತುಂಬಾ ಪ್ರಭಾವ ಬೀರಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ಮಾತನಾಡಿ, ಕೋವಿಡ್ ಸಮಯದಲ್ಲಿ ಜ್ಞಾನಸುಧಾ ಸಂಸ್ಥೆ ನೀಡಿದ ಸಹಕಾರ ಸ್ಮರಣೀಯವಾದುದು ಎಂದರು. ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜ್ಞಾನಸುಧಾ ಹೈಸ್ಕೂಲ್ ವಿಭಾಗದ ಪ್ರಾಂಶುಪಾಲೆ ಉಷಾ ರಾವ್ ಯು. ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಸಂಗೀತಾ ಕಾರ್ಯಕ್ರಮ ನಿರೂಪಿಸಿ, ಉಪ ಪ್ರಾಂಶುಪಾಲೆ ವಾಣಿ ಜಯಶೀಲ್ ವಂದಿಸಿದರು.

Previous articleಚೇತನಾ ವಿಶೇಷ ಶಾಲೆಯಲ್ಲಿ  ಸ್ವಾತಂತ್ರ್ಯೋತ್ಸವ  ಸಂಭ್ರಮ
Next articleಸಾರ್ಥಕ ಜೀವನಕೆ ಕಗ್ಗದ ಸಂದೇಶ ಪ್ರತಿ ಸೋಮವಾರ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಅವರಿಂದ

LEAVE A REPLY

Please enter your comment!
Please enter your name here