
ಕಾರ್ಕಳ : ಪರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆ ನಲ್ಲೂರಿನಲ್ಲಿ 74ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ರೋಟರಿ ಆನ್ಸ್ ಕ್ಲಬ್ ಅಧ್ಯಕ್ಷೆ, ಉದಯೋನ್ಮುಖ ಬರಹಗಾರ್ತಿ ರಮಿತಾ ಶೈಲೆಂದ್ರ ರಾವ್ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯಶಿಕ್ಷಕಿ ಪೂರ್ಣಿಮಾ, ಆನ್ಸ್ ಕಾರ್ಯದರ್ಶಿ ಸುಮಾ ನಾಯಕ್, ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಈ ಸಂದರ್ಭದಲ್ಲಿ ಆನ್ಸ್ ಕ್ಲಬ್ ವತಿಯಿಂದ ಪುಸ್ತಕ ವಿತರಿಸಲಾಯಿತು.