ದಿಲ್ಲಿ, ಆ. 16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೌರವ ನಮನ ಸಲ್ಲಿಸಿದರು.
“ಪ್ರೀತಿಯ ಅಟಲ್ ಜಿ ಅವರಿಗೆ ಪುಣ್ಯ ತಿಥಿಯಂದು ಗೌರವ ನಮನ. ಭಾರತವು ಅವರ ಅತ್ಯುತ್ತಮ ಸೇವೆ ಮತ್ತು ನಮ್ಮ ರಾಷ್ಟ್ರದ ಪ್ರಗತಿಗಾಗಿ ಅವರು ಮಾಡಿದ ಪ್ರಯತ್ನಗಳನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತದೆ” ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ, ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪಿಎಂ ಮೋದಿ ಅವರು ಮಾಜಿ ಪ್ರಧಾನ ಮಂತ್ರಿ ಅಟಲ್ ಅವರ ಸಮಾಧಿ ಸ್ಥಳ ‘ಸದೈವ್ ಅಟಲ್’ಗೆ ತೆರಳಿ, ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕಕ್ಕೆ ಗೌರವಾರ್ಪಣೆ ಮಾಡಿದರು.
“ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಜಿ ಅವರು ದೇಶಭಕ್ತಿ ಮತ್ತು ಭಾರತೀಯ ಸಂಸ್ಕೃತಿಯ ಧ್ವನಿಯಾಗಿದ್ದರು. ಅವರು ಸಮರ್ಪಿತ ರಾಜಕಾರಣಿ ಮತ್ತು ನುರಿತ ಸಂಘಟಕರಾಗಿದ್ದರು. ಅವರು ಬಿಜೆಪಿಯ ಅಡಿಪಾಯ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದರು ಮತ್ತು ಲಕ್ಷಾಂತರ ಕಾರ್ಯಕರ್ತರಿಗೆ ದೇಶದ ಸೇವೆ ಮಾಡಲು ಪ್ರೇರಣೆ ನೀಡಿದರು” ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.