ಕಾರ್ಕಳ : ಕಲಂಬಾಡಿಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. 15ರಂದು 74ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಸಕ ವಿ. ಸುನೀಲ್ ಕುಮಾರ್ ಧ್ವಜಾರೋಹಣಗೈದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಆಚಾರ್ಯ, ದಿವಾಕರ ಬಂಗೇರಾ, ಎಸ್.ಡಿ. ಎಂ.ಸಿ. ಅಧ್ಯಕ್ಷ ರಾಜೇಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್, ಸಹಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ ಶಾಲಿನಿ, ಎಸ್.ಡಿ.ಎಂ. ಸಿ. ಸದಸ್ಯರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಪ್ರೇಮಾ ಕೆ. ಸ್ವಾಗತಿಸಿ, ಸಹಶಿಕ್ಷಕಿ ಕಸ್ತೂರಿ ಯಸ್. ಕಾರ್ಯಕ್ರಮ ನಿರೂಪಿಸಿದರು. ಶಶಿಕಲಾ ವಂದಿಸಿದರು.



























































