50 ಲಕ್ಷ ರೈತರ ಖಾತೆಗಳಿಗೆ ಕಿಸಾನ್‌ ಸಮ್ಮಾನ್‌ ಹಣ ಜಮೆ

ಬೆಂಗಳೂರು, ಆ.16: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1,000 ಕೋ. ರೂ.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆಗೊಳಿಸಲಾಗಿದ್ದು, ಕಳೆದ ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ  ಬಿಸಿ ಪಾಟೀಲ್ ತಿಳಿಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಸಚಿವರು,ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ.

2019-20ನೇ ಸಾಲಿನ ಬೆಳೆ ವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ವಿಮೆಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದಾಗಲೀ ಚಿಂತಿಸುವ ಅವಶ್ಯಕತೆಯಿಲ್ಲ. ಸರ್ಕಾರ ಮತ್ತು ಇಲಾಖೆ ಎಂದಿಗೂ ರೈತರೊಂದಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಸಚಿವರು ಹೇಳಿದರು.

 























































































































error: Content is protected !!
Scroll to Top