ಮಂಗಳೂರು, ಆ. 16: ಶೈಕ್ಷಣಿಕ ಕ್ಷೇತ್ರದ ಸಾಧಕ, ಉದ್ಯಮಿ ತುಂಬೆ ಅಹಮದ್ ಹಾಜಿ ಮುಹಿಯುದ್ದಿನ್ (89) ಭಾನುವಾರ ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬಂಟ್ವಾಳ ತಾಲೂಕಿನ ತುಂಬೆಯಲ್ಲಿ ಮರದ ಉದ್ಯಮವನ್ನು ಸ್ಥಾಪಿಸಿ ಹಂತಹಂತವಾಗಿ ಮೇಲೇರಿದ ಅವರು ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಸ್ಥಾಪಿಸಿ ಪ್ರೌಢ ಶಾಲೆ, ಪಿಯು ಕಾಲೇಜು, ಕೈಗಾರಿಕಾ ತರಬೇತಿ ಸಂಸ್ಥೆ, ಬಿಎ ಆಸ್ಪತ್ರೆ ತೆರೆದು ಮುನ್ನಡೆಸಿದರು.ಸಮುದಾಯದ ಹಿರಿಯ ವ್ಯಕ್ತಿಯಾಗಿ ನೂರಾರು ಶಿಕ್ಷಣ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿ ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ಅವರು ಸೇವೆ ಸಲ್ಲಿಸಿದ್ದಾರೆ.