ಬೆಂಗಳೂರು ಗಲಭೆ : ಆರೋಪಿಗಳಿಂದಲೇ ನಷ್ಟ ವಸೂಲು

0

ಬೆಂಗಳೂರು, ಆ. 17:  ನಗರದ  ಡಿಜೆ  ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಕಳೆದ ಮಂಗಳವಾರ ರಾತ್ರಿ ನಡೆದ ಗಲಭೆಯಿಂದ ಉಂಟಾಗಿರುವ ನಷ್ಟವನ್ನು ಆರೋಪಿಗಳಿಂದಲೇ ವಸೂಲು ಮಾಡಲು ಸರಕಾರ ನಿರ್ಧರಿಸಿದೆ. ಸಿಎಎ ಪ್ರತಿಭಟನೆ ವೇಳೆ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲು ಮಾಡಲಾಗಿತ್ತು. ಈ ಮಾದರಿಯ ಕ್ರಮವನ್ನು ರಾಜ್ಯದಲ್ಲೂ ಅನುಸರಿಸಬೇಕೆಂದು ಬೇಡಿಕೆ ಕೇಳಿ ಬಂದಿತ್ತು.

ಇಂದು ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರಿನ ಗಲಭೆಗೆ ಸಂಬಂಧಿಸಿದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.ಈ ಬಗ್ಗೆ ಸ್ವತಃ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿ ಗಲಭೆ ಮಾಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಗಲಭೆಯಿಂದ ಸಂಭವಿಸಿದ ನಷ್ಟವನ್ನೂ ಆರೋಪಿಗಳಿಂದಲೇ  ವಸೂಲಿ ಮಾಡುವಂತೆ ಸೂಚಿಸಿದ್ದು, ಈ ಸಂಬಂಧ ಕೈಗೊಳ್ಳಬೇಕಾದ ಕಾನೂನು ರೀತಿಯ ಕ್ರಮಗಳನ್ನು ಜರುಗಿಸುವಂತೆಯೂ ಸೂಚನೆ ನೀಡಿದ್ದಾರೆ.

ಆರೋಪಿಗಳ ತ್ವರಿತ ವಿಚಾರಣೆಗಾಗಿ, ಕಾನೂನು ಪ್ರಕ್ರಿಯೆಗಳಿಗಾಗಿ ಮೂವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗಳ ನೇಮಕ, ಗಲಭೆಯಡಿ ಬಂಧಿಸಿರುವ ಆರೋಪಿಗಳ ಜತೆ ಉಗ್ರ ಸಂಘಟನೆಗಳ ಲಿಂಕ್ ಬಗ್ಗೆ ಪರಿಶೀಲನೆಗೆ ನಿರ್ಧಾರ, ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಹಿಂದೆ ಕೇಸ್ ಇದ್ದರೆ ಪರಿಶೀಲಿಸಿ ಅಂಥವರ ಮೇಲೆ ಗೂಂಡಾ ಕಾಯ್ದೆಯ ಅಡಿ ಕೇಸ್‌ ದಾಖಲಿಸುವುದು ಮುಂತಾದ ನಿರ್ಧಾರಗಳನ್ನು  ಈ ಸಭೆಯಲ್ಲಿ ಕೈಗೊಳ್ಳಲಾಗಿದೆ.

 ---
Previous articleಕಡ್ತಲ : ಪೌಷ್ಠಿಕ ಆಹಾರ ಮೇಳ
Next articleಮೊದಲ ರನ್‌ ಔಟ್ ಗೂ ಕೊನೆಯ ರನ್‌ ಔಟ್‌ಗೂ  ನಡುವೆ ಎನಿತು ಅಂತರ…

LEAVE A REPLY

Please enter your comment!
Please enter your name here