
ಹೆಬ್ರಿ : ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ. ಇದಕ್ಕೆ ಉತ್ತಮ ಉದಾಹರಣೆ ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ವಿದ್ಯಾರ್ಥಿ ಅಭಿಷೇಕ್ ಆಚಾರ್ಯ ಎಂದು ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಡಾ. ಭಾರ್ಗವಿ ಐತಾಳ್ ಅಭಿಪ್ರಾಯಪಟ್ಟರು.
ಅವರು ಆ.15ರಂದು ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ನಲ್ಲಿ ನಡೆದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಭಿಷೇಕ್ ಆಚಾರ್ಯ ಅವರನ್ನು ಸನ್ಮಾನಿಸಿ, ಬಳಿಕ ಮಾತನಾಡಿದರು. ಲಯನ್ಸ್ ಕ್ಲಬ್ ನ ಪೂರ್ವ ಅಧ್ಯಕ್ಷ ರಮೇಶ್ ಆಚಾರ್ಯ, ಚಾಣಕ್ಯ ಸಂಸ್ಥೆಯ ಪ್ರಾಂಶುಪಾಲೇ ವೀಣಾ ಯು. ಶೆಟ್ಟಿ ಮಾತನಾಡಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಟಿ.ಜಿ. ಆಚಾರ್ಯ, ಲಯನ್ಸ್ ಪೂರ್ವ ಅಧ್ಯಕ್ಷ ರಮೇಶ್ ಆಚಾರ್ಯ, ಸುನಂದ ರಮೇಶ್ ಆಚಾರ್ಯ, ಡಾ. ರಾಮಚಂದ್ರ ಐತಾಳ್, ಹರೀಶ್ ಪೂಜಾರಿ, ಕೃಷ್ಣ ಶೆಟ್ಟಿ, ಡಾ| ಸುಷ್ಮಾ, ಚಂದ್ರಶೇಖರ್ ಶೆಟ್ಟಿ, ಜ್ಯೋತಿ ಶೆಟ್ಟಿ, ಡಾ| ರೇಷ್ಮಾ , ಸುಜಾತ, ಚಾಣಕ್ಯ ಸಂಸ್ಥೆಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಪತ್ರಕರ್ತರಾದ ಸುಕುಮಾರ್ ಮುನಿಯಾಲು, ದತ್ತ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ದಿನಕರ್ ಪ್ರಭು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೆ. ರಾಮಚಂದ್ರ ವಂದಿಸಿದರು.