
ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ಮತ್ತು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪೌಷ್ಠಿಕ ಆಹಾರ ಮೇಳ ಕಾರ್ಯಕ್ರಮ ಆ. 16ರಂದು ಕಡ್ತಲ ಶಾಲಾ ಸಭಾಂಗಣದಲ್ಲಿ ನಡೆಯಿತು. ತಾಲೂಕು ಯೋಜನಾಧಿಕಾರಿ ವಿ. ಭಾಸ್ಕರ್ ಚೆನ್ನೆಮಣೆ ಆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ಪ್ರಮೋದ್ ಕುಮಾರ್ ಹೆಗ್ಡೆ, ಪ್ರಾದೇಶಿಕ ಕಚೇರಿ ತಾಂತ್ರಿಕ ವಿಭಾಗದ ಮ್ಯಾನೇಜರ್ ರಾಧಿಕಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಒಕ್ಕೂಟದ ಅಧ್ಯಕ್ಷ ಶಾಂತಿ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಶಿಕ್ಷಕಿ ಲಕ್ಷ್ಮೀ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಧಾಕರ್, ಜ್ಞಾನವಿಕಾಸ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಲ್ಲಿಕಾ, ಸೇವಾ ಪ್ರತಿನಿಧಿ ಸುಪ್ರೀತಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.