
ಕಾರ್ಕಳ : ಕೊಂಕಣಿ ಸಾಹಿತ್ಯ ಅಕಾಡಮಿ ನೂತನ ಸದಸ್ಯರಾಗಿ ಕೆ.ಎಂ.ಎಫ್. ನಿರ್ದೇಶಕ ಸಾಣೂರು ನರಸಿಂಹ ಕಾಮತ್ ಆಯ್ಕೆಯಾಗಿರುತ್ತಾರೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಜಗದೀಶ್ ಪೈ ಯವರು ನರಸಿಂಹ ಕಾಮತ್ ಅವರನ್ನು ಆಯ್ಕೆ ಮಾಡಿರುತ್ತಾರೆ. ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಕುರಿತು ವಿಶೇಷ ಆಸಕ್ತಿ ಹೊಂದಿರುವ ನರಸಿಂಹ ಕಾಮತ್ ಅವರು ಇತ್ತೀಚೆಗೆ ಕಾರ್ಕಳದಲ್ಲಿ ನಡೆದ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡಮಿ ಬೆಳ್ಳಿಹಬ್ಬ ಮತ್ತು ಕೊಂಕಣಿ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.