ಅಣ್ಣಾಮಲೈ ಬಿಜೆಪಿ ಸೇರ್ಪಡೆ-ತಮಿಳುನಾಡಿನಲ್ಲಿ ಕಮಲ ಅರಳಲಿದೆ: ಸುನಿಲ್‌ ಕುಮಾರ್

ಕಾರ್ಕಳ : ನಿವೃತ್ತ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರಲಿದ್ದಾರೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ. ಅವರಿಗೆ ಹೃದಯಪೂರ್ವಕ ಸ್ವಾಗತ ಎಂದು ಸಚಿವರು ಟ್ವೀಟ್‌ ಮಾಡಿರುತ್ತಾರೆ.

ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಸಂತಸದ ವಿಚಾರ. ತನ್ನ ದಕ್ಷತೆ, ಕಾರ್ಯಕ್ಷಮತೆ ಮೂಲಕ ಇಡೀ ಕರ್ನಾಟಕದ ಮನೆಮತಾಗಿರುವ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿಗೆ ಭದ್ರ ಅಡಿಪಾಯ ಒದಗಿಸಲಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಕಮಲ ಅರಳಲಿದೆ ಎಂದು ಸರಕಾರದ ಮುಖ್ಯ ಸಚೇತಕ, ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

ನ್ಯೂಸ್‌ ಕಾರ್ಕಳ ಇತ್ತೀಚೆಗೆ ಅಣ್ಣಾಮಲೈ ಅವರೊಂದಿಗೆ ನಡೆಸಿದ ಸಂದರ್ಶನಕ್ಕಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ





































































































































error: Content is protected !!
Scroll to Top