ದಿಲ್ಲಿ,ಆ. 25: ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ ಕೋಟಿಗಟ್ಟಲೆ ರೂಪಾಯಿ ವಂಚಿಸಿ ಪಲಾಯನ ಮಾಡಿರುವ ವಜ್ರ ವ್ಯಾಪಾರಿ ನೀರವ್ ಮೋದಿಯ ಪತ್ನಿ ಅಮಿ ಮೋದಿಯ ವಿರುದ್ಧ ಇಂಟರ್ ಪೋಲ್ ರೆಡ್ ಕಾರ್ನರ್ ನೊಟೀಸ್ ಜಾರಿಗೊಳಿಸಿದೆ. ಅಮಿ ಮೋದಿ ವಿರುದ್ಧ ಭಾರತದಲ್ಲಿ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿ ಈ ನೊಟೀಸ್ ಜಾರಿಯಾಗಿದೆ.
ಅಮಿ ಮೋದಿ ಕಳೆದ ವರ್ಷ ಕೊನೆಯದಾಗಿ ಅಮೆರಿಕದಲ್ಲಿ ಕಾಣಿಸಿಕೊಂಡಿದ್ದಳು. ಈಗ ಎಲ್ಲಿದ್ದಾಳೆ ಎಂಬ ಮಾಹಿತಿ ಯಾರಿಗೂ ಇಲ್ಲ.















