ಪದವಿ ತರಗತಿಗಳಿಗೆ ಸೆ.1 ರಿಂದ ಆನ್‌ಲೈನ್‌, ಅಕ್ಟೋಬರ್‌ ನಿಂದ ಆಫ್ ಲೈನ್‌ ಕ್ಲಾಸ್‌

ಬೆಂಗಳೂರು,ಆ.26: ರಾಜ್ಯದಲ್ಲಿ ಪದವಿ ತರಗತಿಗಳಿಗೆ  ಸೆ. 1 ರಿಂದ ಆನ್‌ಲೈನ್‌ ಕ್ಲಾಸುಗಳು ಮತ್ತು  ಅಕ್ಟೋಬರ್‌ ನಿಂದ ನೇರ ತರಗತಿಗಳು ಪ್ರಾರಂಭವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ ಎಂದರು.

ರಾಜ್ಯ ಸರಕಾರವೂ ಮುಂದಿನ ತಿಂಗಳಿಂದ  ಅನ್ ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.

















































































error: Content is protected !!
Scroll to Top