ಕಾರ್ಕಳ : ಎಸ್‌ಎನ್‌ವಿ ಅನುದಾನಿತ ಪ್ರೌಢಶಾಲೆ ಹಿರಿಯಂಗಡಿ ಇಲ್ಲಿನ ಹಿರಿಯ ಸಹಾಯಕ ಶಿಕ್ಷಕ ಕೆ. ಸುಬ್ರಹ್ಮಣ್ಯ ಆಚಾರ್ಯ ಇವರು ಆ. 31ರಂದು ನಿವೃತ್ತಿ ಹೊಂದಲಿದ್ದಾರೆ. ಕಳೆದ 30 ವರ್ಷಗಳಿಂದ ಎಸ್‌ಎನ್‌ವಿ ಶಾಲೆಯಲ್ಲಿ ಸೇವೆ ಸಲ್ಲಿಸಿರುವ ಇವರು ಪಠ್ಯ ಮಾತ್ರವಲ್ಲದೇ ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುತ್ತಿದ್ದರು. ಈ ಮೂಲಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿ ಗುರುತಿಸಿಕೊಂಡಿದ್ದ ಇವರು ಅನೇಕ ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡುವ ಮೂಲಕ ನೆರವಾಗಿದ್ದರು. ಧಾರ್ಮಿಕ ಕ್ಷೇತ್ರದಲ್ಲೂ ತನ್ನದೇ ರೀತಿಯಲ್ಲಿ ಸೇವೆ ಸಲ್ಲಿಸಿರುವ ಸುಬ್ರಹ್ಮಣ್ಯ ಆಚಾರ್ಯರು ಮಠದ ಕೆರೆ ನಾಗಬನ, ಬಸವಲಿಂಗೇಶ್ವರ ದೇವಸ್ಥಾನ ಸೇರಿದಂತೆ ಅನೇಕ ದೇಗುಲಗಳ ಅಭಿವೃದ್ಧಿಯಲ್ಲಿ ಸಹಕಾರ ನೀಡಿರುತ್ತಾರೆ. 0
ಪ್ರಶಸ್ತಿ
ಶೈಕ್ಷಣಿಕ ಕ್ಷೇತ್ರದ ಸೇವೆಗಾಗಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ, ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ಇವರನನ್ನು ಕಾರ್ಕಳದ ಅನೇಕ ಸಂಘ-ಸಂಸ್ಥೆಗಳು ಗೌರವಿಸಿವೆ.



































































