ಬೆಳ್ಮಣ್‌ : ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಕಾರ್ಕಳ : ಬೆಳ್ಮಣ್‌ ಜಿ.ಪಂ. ಕ್ಷೇತ್ರ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ “ಪ್ರಧಾನಿ ನರೇಂದ್ರ ಮೋದಿ ಸಂಕಲ್ಪದ ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ನಮ್ಮ ಪಾತ್ರ” ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣ ಕಾರ್ಯಕ್ರಮ ಆ. 29ರಂದು ಸೈಂಟ್‌ ಜೋಸೆಫ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೆಳ್ಮಣ್‌ನಲ್ಲಿ ನಡೆಯಲಿದೆ. ಶಾಸಕ ವಿ. ಸುನಿಲ್‌ ಕುಮಾರ್‌ ಬಹುಮಾನ ವಿತರಣೆ ಮಾಡಲಿದ್ದು, ಪತ್ರಕರ್ತ ಶ್ರೀಕಾಂತ್‌ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್‌ ಜಿ.ಎಸ್.‌ ಭಾಗವಹಿಸಲಿದ್ದಾರೆ ಎಂದು ಜಿ.ಪಂ. ಸದಸ್ಯೆ ರೇಶ್ಮಾ ಉದಯ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















































error: Content is protected !!
Scroll to Top