ಬೆಳ್ಮಣ್‌ : ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಕಾರ್ಕಳ : ಸ್ವಾತಂತ್ರ್ಯ ಸಂಗ್ರಾಮದ ಪೂರ್ವದಲ್ಲಿಯೇ ಸ್ವದೇಶೀ ಆಂದೋಲನಗಳ ಮೂಲಕ ಆತ್ಮ ನಿರ್ಭರ ಭಾರತದ ಕೂಗು ಬಲಿಷ್ಠವಾಗಿತ್ತು. ಇದೀಗ ಪ್ರಧಾನಿ ಮೋದಿಯವರು ಆತ್ಮನಿರ್ಭರ ಘೋಷಣೆ ಮಾಡುವ ಮೂಲಕ ಹೊಸ ವೇಗ ದೊರೆದಂತಾಗಿದೆ ಎಂದು ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಹೇಳಿದರು.

ಅವರು ಆ. 29ರಂದು ಬೆಳ್ಮಣ್ ಸಂತ ಜೋಸೆಫ್‌ ವಿದ್ಯಾಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿಯವರ ಸಂಯೋಜನೆಯಲ್ಲಿ ಬೆಳ್ಮಣ್ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸಿದ “ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯ ಆತ್ಮನಿರ್ಭರ ಬಾರತ ನಿರ್ಮಾಣದಲ್ಲಿ ನಮ್ಮ ಪಾತ್ರ” ವಿಷಯದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶಾಸಕ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ಬಹುಮಾನ ವಿತರಿಸಿದರು. ತಾ.ಪಂ. ಸದಸ್ಯೆ ಆಶಾ ದೇವೇಂದ್ರ ಶೆಟ್ಟಿ, ಎಪಿಎಂಸಿ ಅಧ್ಯಕ್ಷ ಮೋಹನದಾಸ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್., ಬೆಳ್ಮಣ್ ವಲಯ ಶಿಕ್ಷಣ ಸಂಯೋಜಕ ಪ್ರಕಾಶ್ , ನಂದಳಿಕೆ ಹಾಗೂ ಮುಂಡ್ಕೂರು ಕ್ಲಸ್ಟರ್ ಸಿಆರ್‌ಪಿ ಚಂದ್ರಕಾಂತ ಡೇಸಾ, ಸಂತ ಜೋಸೆಫ್‌ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಲಿಡಿಯಾ ಅರಾನ್ಹಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ವಿನ್ಸೆಂಟ್ ಪಿಂಟೋ ಸ್ವಾಗತಿಸಿ, ರೇಷ್ಮಾ ಉದಯ ಕುಮಾರ್ ಶೆಟ್ಟಿ ಪ್ರಸ್ತಾವನೆಗೈದರು. ನಿಟ್ಟೆ ಸಿಆರ್‌ಪಿ ಶಿವಾನಂದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.































































































error: Content is protected !!
Scroll to Top