ಕಾರ್ಕಳ, ಆ.29:ಉಡುಪಿ ಜಿಲ್ಲಾಡಳಿತ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಕಳ ವಿಧಾನಸಭಾ ಕ್ಟೇತ್ರದಲ್ಲಿ ವಿಕಲ ಚೇತನರಿಗೆ ಆ.29ರಂದು ಸಾಧನ ಸಲಕರಣೆ ವಿತರಣೆ ಮಾಡಲಾಯಿತು.
ಕಾರ್ಕಳದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸುನಿಲ್ ಕುಮಾರ್ ಅವರು ಸಾಧನ ಸಲಕರಣೆಗಳನ್ನು ವಿತರಿಸಿದರು.


































































