ಮತ್ತೆ ಮೂವರು ಉಗ್ರರು ಬಲಿ : ಓರ್ವ ಯೋಧ ಹುತಾತ್ಮ

ಶ್ರೀನಗರ, ಆ. 29: ನಿನ್ನೆ ನಾಲ್ವರು ಉಗ್ರರನ್ನು ಬೇಟೆಯಾಡಿದ ಬೆನ್ನಿಗೆ ಮತ್ತೆ ಮೂವರು ಭಯೋತ್ಪಾದಕರು  ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.ಈ  ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಕಾಶ್ಮೀರದ ಪೊಲೀಸ್, ಭಾರತೀಯ ಸೇನೆ, ಸಿಆರ್ ಪಿಎಫ್ ಪುಲ್ವಾಮದಲ್ಲಿನ ಝಡೂರ ಪ್ರದೇಶದಲ್ಲಿ ಜಂಟಿಯಾಗಿ  ಕಾರ್ಯಾಚರಣೆ ನಡೆಸಿವೆ.  

ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಓರ್ವ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಎನ್ ಕೌಂಟರ್ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಉಗ್ರರು ಯಾವ ಸಂಘಟನೆಯವರೆಂದು ಇನ್ನಷ್ಟೇ ತಿಳಿಯಬೇಕಿದೆ. ಆ.29 ರಂದು ರಾತ್ರಿ 1 ಗಂಟೆಗೆ ಈ ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೂ ಮುನ್ನ ಆ.28 ರಂದು ನಾಲ್ವರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿತ್ತು. ಈ ಎನ್ ಕೌಂಟರ್ ಮೂಲಕ ಜಮ್ಮು-ಕಾಶ್ಮೀರದಲ್ಲಿ 24 ಗಂಟೆಗಳಲ್ಲಿ 7 ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ವರ್ಷ ಹತರಾಗಿರುವ ಭಯೋತ್ಪಾದಕರ ಸಂಖ್ಯೆ 153 ಕ್ಕೆ ಏರಿಕೆಯಾಗಿದೆ. 



































































































error: Content is protected !!
Scroll to Top