ಮಂಗಳೂರು, ಆ.30:ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು ತಗಲಿದೆ.
ನಳಿನ್ ಕುಮಾರ್ ಕಟೀಲ್ ಅವರೇ ಟ್ವೀಟ್ ಮಾಡಿ ಕೊರೊನಾ ಪೊಸಿಟಿವ್ ವರದಿ ಬಂದಿರುವುದನ್ನು ತಿಳಿಸಿದ್ದಾರೆ. ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ರೋಗ ಲಕ್ಷಣಗಳಿಲ್ಲದಿದ್ದರೂ ವರದಿ ಪೊಸಿಟಿವ್ ಬಂದ ಕಾರಣ ಆಸ್ಪತ್ರೆಗೆ ದಾಸಖಲಾಗಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಜಾಗರೂಕತೆಯಿಂದ ಇರಿ ಎಂದು ಮನವಿ ಮಾಡಿದ್ದಾರೆ.
































