ದಿಲ್ಲಿ, ಆ. 31 : ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ವೈರಸ್ ಸೋಂಕಿತರ ಸಂಖ್ಯೆ ಹೊಸ ದಾಖಲೆಯತ್ತ ಸಾಗುತ್ತಿದೆ. ಸೋಮವಾರ ಒಂದೇ ದಿನ 78,512 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಸೋಮವಾರ 78,512 ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36,21,246ಕ್ಕೆ ಹೆಚ್ಚಳವಾಗಿದೆ. ಇದೇ ವೇಳೆ ಒಂದೇ ದಿನ 971 ಮಂದಿ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ 64,469ಕ್ಕೇರಿದೆ.
27,74,802 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ ಇನ್ನೂ 7,81,975 ಸಕ್ರಿಯ ಪ್ರಕರಣಗಳು ಇವೆ.

ನಿನ್ನೆ ಕೂಡ ದೇಶದಲ್ಲಿ ಅತ್ಯಧಿಕ ಕೊರೊನಾ ಸೋಂಕು ಸಂಖ್ಯೆ ದಾಖಲಾಗಿತ್ತು. ಭಾನುವಾರ ಒಂದೇ ದಿನ ದಾಖಲೆಯ 78,761 ಪ್ರಕರಣ ದಾಖಲಾಗಿತ್ತು. ಇಂದೂ ಕೂಡ 78,512 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ದಿನೇಶ್ ಗುಂಡೂರಾವ್ ಲೇವಡಿ
ಕೊರೊನಾ ಸೋಂಕಿನಲ್ಲಿ ಭಾರತ ವಿಶ್ವದಲ್ಲಿ ಎರಡನೇ ಸ್ಥಾನಕ್ಕೇರಿರು ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರವನ್ನು ಲೇವಡಿ ಮಾಡಿದ್ದಾರೆ.
ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ಜನರನ್ನು ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಭಾವನಾತ್ಮಕವಾಗಿ ಮೋಸಗೊಳಿಸಿದ್ದರ ಪರಿಣಾಮವೇ ಕಾರಣ ಎಂದು ಕೆಪಿಸಿಸಿ ಮಾಜಿ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ವಿಶ್ವದಲ್ಲೇ ಮೊದಲನೇ ಸ್ಥಾನಕ್ಕೆ ಭಾರತ ಏರುವುದು ಖಚಿತ. ಬಿಜೆಪಿ ಘೋಷಿತ ‘ವಿಶ್ವಗುರು’ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ? ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
























