ಉಡುಪಿ : ಕೋವಿಡ್‌ -19 ನಿರ್ಬಂಧ ಸಡಿಲಗೊಳಿಸಿದ ಡಿಸಿ

ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿಬಂಧನೆಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬಂದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಸೆ. 1 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ಕೆಳಗಿನಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಕಂಟೈನ್ ಮೆಂಟ್ ವಲಯಗಳಲ್ಲಿ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು.
ಕಂಟೈನ್ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸೆ. 30ರವರೆಗೆ ಇರುವುದು. ವೈದ್ಯಕೀಯ ತುರ್ತು ಸೇವೆ, ಅವಶ್ಯಕತೆ ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದೆ. ಇವುಗಳ ಹೊರತು ಕಂಟೈನ್ ಮೆಂಟ್ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನವಲನಗಳನ್ನು ನಿಷೇಧಿಲಾಗಿದೆ.
ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಚಟುವಟಿಕೆಗಳು ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳನ್ನು ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿಸಿದ, ಸೂಚನೆಗಳು ಮತ್ತು ಕಾರ್ಯಾಚರಣೆಯ ಕಾರ್ಯವಿಧಾನಗಳ ಷರತ್ತುಗಳೊಂದಿಗೆ ನಡೆಸಲು ಅನುಮತಿಸಲಾಗಿದೆ. ಶಾಲೆ, ಕಾಲೇಜು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು 30ನೇ ಸೆಪ್ಟೆಂಬರ್ ರವರೆಗೆ ವಿದ್ಯಾರ್ಥಿಗಳು ಮತ್ತು ನಿಯತ ತರಗತಿ ಚಟುವಟಿಕೆಗಳಿಗೆ ಮುಚ್ಚಿರುವುದು ಮುಂದುವರಿಯಲಿದೆ. ಆದರೂ, ಈ ಕೆಳಕಂಡ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.ಆನ್‌ಲೈನ್/ದೂರಶಿಕ್ಷಣ ಕಲಿಕೆಗಳಿಗೆ ಅನುಮತಿ ಮುಂದುವರಿಸಬೇಕು ಮತ್ತು ಪ್ರೋತ್ಸಾಹಿಸಲಾಗುವುದು.

20ನೇ ಸೆಪ್ಟೆಂಬರ್ ರಿಂದ ಜಾರಿಗೆ ಬರುವಂತೆ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಮಾತ್ರ ಆನ್‌ಲೈನ್ ಬೋಧನೆ/ಟೆಲಿ ಸಮಾಲೋಚನೆ ಹಾಗೂ ತತ್ಸಂಬಂಧಿತ ಕಾರ್ಯಕ್ಕಾಗಿ ಒಮ್ಮೆಗೆ ಶಾಲೆಗಳಿಗೆ ಶೇ. ೫೦%ರವರಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕರೆಯಲು ಅನುಮತಿಸಲಾಗುವುದು.
3.)9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯುವುದಕ್ಕಾಗಿ ಕಂಟೈನ್‌ಮೆಂಟ್ ವಲಯಗಳ ಹೂರಗಿನ ಪ್ರದೇಶಗಳಲ್ಲಿ ಮಾತ್ರ ಸ್ವಇಚ್ಚೆಯ ಆಧಾರದ ಮೇಲೆ ತಮ್ಮ ಶಾಲೆಗಳಿಗೆ ಭೇಟಿ ನೀಡಲು ಅನುಮತಿಸಬಹುದು. ಇದು ಅವರ ತಂದೆ-ತಾಯಿಗಳ ಮತ್ತು ಪೋ?ಕರ ಲಿಖಿತ ಅನುಮತಿಗೆ ಒಳಪಟ್ಟಿರುತ್ತದೆ ಮತ್ತು ಇದಕ್ಕೆ 21ನೇ ಸೆಪ್ಟೆಂಬರ್ ರಿಂದ ಜಾರಿಗೆ ಬರುವಂತೆ ಅನುಮತಿ ನೀಡಲಾಗುವುದು.

ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆಗಳು, ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐಗಳು), ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಅಥವಾ ರಾಜ್ಯ ಕೌಶಲ್ಯ ಅಭಿವೃದ್ಧಿ ಮಿಷನ್‌ನಲ್ಲಿ ಅಥವಾ ಭಾರತ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಇತರ ಮಂತ್ರಾಲಯಗಳಲ್ಲಿ /ಸಚಿವಾಲಯಗಳಲ್ಲಿ ನೋಂದಾಯಿಸಿಕೊಂಡ ಅಲ್ಪಾವಧಿ ತರಬೇತಿ ಕೇಂದ್ರಗಳಲ್ಲಿ ಕೌಶಲ್ಯ ಅಥವಾ ಉದ್ಯಮಶೀಲತೆ ತರಬೇತಿಯನ್ನು ಪಡೆಯುವುದಕ್ಕೆ ಅನುಮತಿ ನೀಡಲಾಗುವುದು.
ರಾಷ್ಟ್ರೀಯ ಉದ್ಯಮಶೀಲತೆ ಹಾಗೂ ಸಣ್ಣ ವ್ಯವಹಾರ ಅಭಿವೃದ್ಧಿ ಸಂಖ್ಯೆ (ಎನ್ ಐಇಎಸ್‌ಬಿಯುಡಿ) ಭಾರತೀಯ ಉದ್ಯಮಶೀಲತ ಸಂಸ್ಥೆ (ಐಐಇ)ಗೆ ಹಾಗೂ ಆ ಸಂಖ್ಯೆಯಡಿ ತರಬೇತಿ ಒದಗಿಸುವವರಿಗೆ ಸಹ ಅನುಮತಿ ನೀಡಲಾಗುವುದು.
ಇವುಗಳಿಗೆ ದಿನಾಂಕ ೨೧ನೇ ಸೆಪ್ಟೆಂಬರ್ ೨೦೨೦ ರಿಂದ ಜಾರಿಗೆ ಬರುವಂತೆ ಅನುಮತಿ ನೀಡಲಾಗುವುದು.

ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿನ ಪರಿಸ್ಥಿತಿಯ ನಿರ್ಧರಣೆಯ ಆಧಾರದ ಮೇಲೆ ಹಾಗೂ ಕೋವಿಡ್-19ರ ಸನ್ನಿವೇಶ ಗಮನದಲ್ಲಿಟ್ಟುಕೊಂಡು ಗೃಹ ವ್ಯವಹಾರ ಮಂತ್ರಾಲಯದೊಂದಿಗೆ ಸಮಾಲೋಚಿಸಿ ಪ್ರಯೋಗಾಲಯ ಮತ್ತು ಪ್ರಾಯೋಗಿಕ ಚಟುವಟಿಕೆಗಳ ಅಗತ್ಯವಿರುವ ತಾಂತ್ರಿಕ ಮತ್ತು ವೃತ್ತಿಪರ ಕಾರ್ಯಕ್ರಮಗಳ ಸಂಶೋಧನಾ ವಿದ್ಯಾರ್ಥಿಗಳು (ಪಿಎಚ್ ಡಿ) ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡುವುದು.

ಗರಿಷ್ಠ 100 ಜನರ ಪರಿಮಿತಿಗೆ ಒಳಪಟ್ಟು ಸಾಮಾಜಿಕ / ರಾಜಕೀಯ / ಕ್ರೀಡೆ / ಮನೋರಂಜನೆ /ಶೈಕ್ಷಣಿಕ / ಸಾಂಸ್ಕೃತಿಕ / ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳಿಗೆ 21ನೇ ಸೆಪ್ಟೆಂಬರ್ ರಿಂದ ಜಾರಿಗೆ ಬರುವಂತೆ ಮುಖಗವಸು ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಥರ್ಮಲ್ ಸ್ಯಾನಿಂಗ್ ಮತ್ತು ಕೈತೊಳೆಯುವಿಕೆ ಅಥವಾ ಸ್ಯಾನಿಟೈಜರ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಅನುಮತಿ ನೀಡಲಾಗುವುದು.
ಆದರೂ, ವಿವಾಹ ಸಂಬಂಧಿತ ಸಮಾರಂಭಗಳಿಗೆ ಅತಿಥಿಗಳ ಸಂಖ್ಯೆ 50 ಜನ ಮೀರದಂತೆ ಮತ್ತು ಅಂತ್ಯ ಸಂಸ್ಕಾರ ಸಂಬಂಧಿತ ಕಾರ್ಯಗಳಿಗೆ 20 ಜನರು ಮೀರದಂತೆ 20ನೇ ಸೆಪ್ಟೆಂಬರ್ ರವರೆಗೆ ಅನುಮತಿ ನೀಡಿರುವುದನ್ನು ಮುಂದುವರೆಸಲಾಗಿದೆ. ಆ ತರುವಾಯ 100 ಜನರ ಗರಿಷ್ಠ ಮಿತಿಯು ಅನ್ವಯವಾಗಲಿದೆ.

ಸಿನೆಮಾ ಮಂದಿರಗಳು. ಈಜುಕೊಳಗಳು, ಮನೋರಂಜನಾ ಉದ್ಯಾನವನಗಳು, ರಂಗಮಂದಿರಗಳು ಮತ್ತು ಅಂತಹುದೇ ಸ್ಥಳಗಳು ಮುಚ್ಚಿರಲಿವೆ . ಆದರೂ 21 ನೇ ಸೆಪ್ಟೆಂಬರ್ ರಿಂದ ಜಾರಿಗೆ ಬರುವಂತೆ ಬಯಲು ಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗುವುದು.
ಗೃಹ ವ್ಯವಹಾರ ಮಂತ್ರಾಲಯ(ಎಂಎಚ್‌ಎ)ವು ಅನುಮತಿಸಿದಂತೆ ಹೊರತುಪಡಿಸಿ ಪ್ರಯಾಣಿಕರ ಅಂತರ-ರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿಬಂಧ ಇರಲಿದೆ.
ಕೋವಿಡ್ -19ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನ
ಸಾರ್ವಜನಿಕ ಸ್ದಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸುವುದು ಮತ್ತು ಎಲ್ಲಾ ವ್ಯಕ್ತಿಗಳು ಸಾಮಾಜಿಕ ಅಂತರವನ್ನು ಅನುಸರಿಸುವುದು. (ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಳ್ಳುವುದು). ಉಲ್ಲಂಘನೆಗಾಗಿ ನಿಗದಿತ ಅಧಿಕಾರಿಗಳು ನಿಗದಿಪಡಿಸಿದ ದಂಡವನ್ನು ವಿಧಿಸುವುದು/ಕಾನೂನು ಕ್ರಮ ವಹಿಸುವುದು.









































































































error: Content is protected !!
Scroll to Top