ದಿಲ್ಲಿ, ಆ.31: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ದಿಲ್ಲಿಯ ಸೇನಾ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಮುಖರ್ಜಿ ಕೋಮಾ ಸ್ಥಿತಿಯಲ್ಲಿದ್ದಾರೆ.
ನಿನ್ನೆಯಿಂದೀಚೆಗೆ ಪ್ರಣವ್ ಮುಖರ್ಜಿ ಆರೋಗ್ಯ ಸ್ಥಿತಿ ಇನ್ನಷ್ಟು ಇಳಿಮುಖವಾಗಿದೆ. ಅವರ ಶ್ವಾಸಕೋಶದಲ್ಲಿ ಗಂಭೀರ ಸಮಸ್ಯೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಿದುಳಿನ ರಕ್ತಸ್ರಾವದ ಚಿಕಿತ್ಸೆಗಾಗಿ ಆ.10ರಂದು ಆಸ್ಪತ್ರೆಗೆ ದಾಖಲಾಗಿರುವ ಮುಖರ್ಜಿ ವೆಂಟಿಲೇಟರ್ ನಲ್ಲಿದ್ದಾರೆ. ಈ ನಡುವೆ ಅವರಿಗೆ ಕೊರೊನಾ ಸೋಂಕು ತಗಲಿರುವುದು ಕೂಡ ದೃಢಪಟ್ಟಿತ್ತು.










































