ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

ದಿಲ್ಲಿ, ಸೆ.3 : ಹ್ಯಾಕರ್‌ ಗಳು ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟ್ಟರ್‌ ಖಾತೆಗೂ ಲಗ್ಗೆ ಹಾಕಿದ್ದಾರೆ.  ಮೋದಿ ಅವರ ವೈಯಕ್ತಿಕ ವೆಬ್‌ಸೈಟ್‌ಗೆ ಲಿಂಕ್‌ ಆಗಿರುವ ಟ್ವಿಟರ್ ಖಾತೆ ಹ್ಯಾಕ್‌ ಆಗಿರುವುದನ್ನು ಗುರುವಾರ ಟ್ವಿಟರ್‌ ಖಚಿತ ಪಡಿಸಿದೆ.

ಪರಿಹಾರ ನಿಧಿಗೆ ಕ್ರಿಪ್ಟೊ ಕರೆನ್ಸಿಗಳ ಮೂಲಕ ಸಹಾಯ ಮಾಡುವಂತೆ ಸರಣಿ ಟ್ವೀಟ್‌ಗಳ ಮೂಲಕ ಪ್ರಧಾನಿ ಮೋದಿ ವೆಬ್‌ಸೈಟ್‌ ಖಾತೆಯಿಂದ ಮನವಿ ಪ್ರಕಟಗೊಂಡಿದೆ.

ಮೋದಿ ಅವರ ವೆಬ್‌ಸೈಟ್‌ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಟ್ವಿಟರ್ ಹೇಳಿದೆ.

ಈ ಖಾತೆಯಿಂದ ಹ್ಯಾಕರ್ ಗಳು ಬಿಟ್ ಕಾಯಿನ್ ದೇಣಿಗೆ ನೀಡುವಂತೆ ಕೋರಿ ಹಲವು ಟ್ವೀಟ್ ಗಳನ್ನು ಮಾಡಿದ್ದಾರೆ. ಅದಲ್ಲದೆ ಈ ಟ್ವಿಟ್ಟರ್ ಖಾತೆ ಜಾನ್ ವಿಕ್ ಎಂಬಾತನಿಂದ ಹ್ಯಾಕ್ ಮಾಡಲಾಗಿದೆ ಎಂದೂ ಟ್ವೀಟ್ ಮಾಡಲಾಗಿದೆ.

ಪ್ರಧಾನಿ ಟ್ವಿಟರ್‌ ಖಾತೆಯ ಮೇಲೆ ಇದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಆ ಖಾತೆಯನ್ನು 6.1 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ.ನರೇಂದ್ರ ಮೋದಿಯರ ವೈಯಕ್ತಿಕ ವೆಬ್ ಸೈಟ್ ಗೆ ಲಿಂಕ್ ಆಗಿರುವ ಈ ಟ್ವಿಟ್ಟರ್ ಖಾತೆ ಸುಮಾರು 2.5 ಮಿಲಿಯನ್ಫಾಲೋವರ್ಸ್ ಗಳನ್ನು ಹೊಂದಿದೆ.


 









error: Content is protected !!
Scroll to Top