ಕೊರೋನಾ ಸಂಕಷ್ಟ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ-ಅಶೋಕ್‌ ಕೊಡವೂರು ಆರೋಪ

ಕಾರ್ಕಳ : ರಾಜ್ಯದಲ್ಲಿ ತಾಂಡವವಾಡುತ್ತಿರುವ ಕೊರೊನಾ ಸಾಂಕ್ರಾಮಿಕತೆಯ ಸಂಕಷ್ಟವನ್ನು ಆಡಳಿತಾರೂಢ ಬಿಜೆಪಿ ಸರಕಾರ ತನ್ನ ರಾಜಕೀಯ ಹಾಗೂ ಆರ್ಥಿಕ ಲಾಭಕ್ಕೆ ದುರುಪಯೋಗ ಪಡಿಸಿಕೊಳ್ಳುತ್ತಿದೆ. ರೋಗಿಗಳಿಗೆ ಸಕಾಲದಲ್ಲಿ ಔಷಧಿ ಸಿಗದೇ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.

ಅವರು ಸೆ. 3ರಂದು ರಾಜೀವ ಗಾಂಧಿ ಸಭಾ ಭವನದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಕೋವಿದ್-19 ಮಾಹಿತಿ ಹಾಗೂ ಆರೋಗ್ಯ ಹಸ್ತ ಕಾರ್ಯಕ್ರಮ ಉದ್ಘಾಟಿಸಿ, ಬಳಿಕ ಮಾತನಾಡಿದರು.

ಪುಷ್ಪನಮನ

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೇಖರ ಮಡಿವಾಳ್‌, ಪ್ರಣಬ್ ಮುಖರ್ಜಿ ತನ್ನ ರಾಜಕೀಯ ಬದುಕಿನುದ್ದಕ್ಕೂ ಕಾಂಗ್ರೆಸ್ ಪರಂಪರೆಯನ್ನು ಎತ್ತಿ ಹಿಡಿದು ಸಾಮಾಜಿಕ ನ್ಯಾಯ‌ಕ್ಕೆ ತನ್ನದ್ದೆ ಆದ ಕೊಡುಗೆ ನೀಡಿದ್ದರು. ಅವರೊಬ್ಬ ಅಪರೂಪದ ರಾಜನೀತಿಜ್ಞ ಎಂದು ಬಣ್ಣಿಸಿದರು.

ಡಾ. ಸಂದೀಪ್ ಕುಮಾರ್ ಶೆಟ್ಟಿ ಕೋವಿದ್- 19 ನಿಯಂತ್ರಣ ಹಾಗೂ ಸಾಮಾಜಿಕ ಜಾಗೃತಿಯ ಕುರಿತು ಮಾಹಿತಿ ನೀಡಿದರು. ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿಸಿಸಿ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಡಿಸಿಸಿ ಸದಸ್ಯ ಸಿರಿಯಣ್ಣ ಶೆಟ್ಟಿ, ಕಾರ್ಕಳ ನಿರೀಕ್ಷಕ, ಡಿಸಿಸಿ ಕಾರ್ಯದರ್ಶಿ ಕುಶಲ ಶೆಟ್ಟಿ, ತಾ.ಪಂ. ಸದಸ್ಯ ಸುಧಾಕರ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ಯುವಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಳಿನಿ ಆಚಾರ್ಯ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಂತಿ ಶೆಟ್ಟಿ, ಹಿಂದುಳಿದ ವರ್ಗದ ಅಧ್ಯಕ್ಷ ಕುಶಮೂಲ್ಯ, ಎಸ್ಸಿ ಘಟಕದ ಅಧ್ಯಕ್ಷ ಅಣ್ಣಪ್ಪ ನಕ್ರೆ, ಐಟಿ ಸೆಲ್ ನ ಸತೀಶ್ ಕಾರ್ಕಳ, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಆರೀಫ್ ಕಲ್ಲೊಟ್ಟೆ ಮತ್ತಿತರರು ಉಪಸ್ಥಿತರಿದ್ದರು. ಕಾಂಗ್ರೆಸ್ ವಕ್ತಾರ ನಕ್ರೆ ಬಿಪಿನ್‌ ಚಂದ್ರಪಾಲ್ ಕಾರ್ಯಕ್ರ ನಿರ್ವಹಿಸಿದರು.













































error: Content is protected !!
Scroll to Top