ಹತ್ಯೆ ಸಂಚಿನ ಗುಮಾನಿ : ಪ್ರಧಾನಿ ಭದ್ರತೆ ಇನ್ನಷ್ಟು ಬಿಗು

ದಿಲ್ಲಿ, ಸೆ. 4: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಷಡ್ಯಂತ್ರ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ  ಅವರ ಭದ್ರತೆಯನ್ನು ಇನ್ನಷ್ಟು ಬಿಗುಪಡಿಸಲಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ)ಗೆ ಮೋದಿಯನ್ನು ಸಾಯಿಸಬೇಕು ಎಂದು ಹೇಳಿರುವ ಇ-ಮೈಲ್ ಬಂದಿದ್ದು, ಇದಾದ ಬಳಿಕ ಕೇಂದ್ರ ಗುಪ್ತಚರ ಇಲಾಖೆ ಮತ್ತು ರಕ್ಷಣಾ ಗುಪ್ತಚರ ಇಲಾಖೆಗಳ ಹಿರಿಯ ಪ್ರತಿನಿಧಿಗಳನ್ನು ಹೊಂದಿರುವ ಬಹು ಸಂಸ್ಥೆ ಸಮನ್ವಯ ಕೇಂದ್ರ(ಎಂಎಸಿ)ವನ್ನು ಸಂಪರ್ಕಿಸಿ ಇಮೇಲ್ ಎಲ್ಲಿಂದ ಬಂದಿರುವುದು, ಕಳುಹಿಸಿದವರು ಯಾರು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದೆ.

ಕಳೆದ ಆಗಸ್ಟ್ 8ರಂದು ‘ylalwani12345@gmail.com’ ಎಂಬ ವಿಳಾಸದಿಂದ ಈ ಮೇಲ್ ಬಂದಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ವತಂತ್ರವಾಗಿ ತನಿಖೆ ನಡೆಸದೆ ಅದನ್ನು ಕೇಂದ್ರ ತನಿಖಾ ಗುಪ್ತಚರ ಸಂಸ್ಥೆಗೆ ವರ್ಗಾಯಿಸಿದೆ.

ಪ್ರಾಥಮಿಕ ತನಿಖೆಯಿಂದ ಇದು ಭಾರತದ ಹೊರಗಿನಿಂದ ಬಂದಿರುವ ಇ-ಮೈಲ್‌ ಎಂದು ತಿಳಿದುಬಂದಿದೆ.







































error: Content is protected !!
Scroll to Top