ಬೆಂಗಳೂರು, ಸೆ. 5:ಮಾದಕವಸ್ತು ಪೂರೈಕೆದಾರರ ಜೊತೆಗೆ ನಂಟು ಹೊಂದಿರುವ ಸಂಬಂಧ ನಿನ್ನೆ ಸೆರೆಯಾಗಿರುವ ಕನ್ನಡ ನಟಿ ರಾಗಿಣಿಯನ್ನು ನ್ಯಾಯಾಲಯ ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಮೂರು ದಿನಗಳ ಮಟ್ಟಿಗೆ ಸಿಸಿಬಿ ಕಸ್ಟಡಿಗೆ ನೀಡಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ರಾತ್ರಿ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ರಾಗಿಣಿಗೆ 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಆದೇಶಿಸಿದ್ದಾರೆ.
ಅನಂತರ ಬೌರಿಂಗ್ ಆಸ್ಪತ್ರೆಯಲ್ಲಿ ಅವರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

ಡ್ರಗ್ಸ್ ಸೇವನೆ ಮತ್ತು ಡ್ರಗ ಪೂರೈಕೆದಾರರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ರಾಗಿಣಿಯನ್ನು ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಾಗಿಣಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ನಟಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ರಾಗಿಣಿಯನ್ನು ಬಂಧಿಸಿದ್ದರು.
ನಟಿ ರಾಗಿಣಿ ಆಪ್ತ ರವಿಶಂಕರ್ ವಶಕ್ಕೆ ಪಡೆದ ಬಳಿಕ ನಟಿ ರಾಗಿಣಿ ವಾಟ್ಸಪ್ ಚಾಟ್ ಡಿಲೀಟ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ವಾಟ್ಸಪ್ ಅಪ್ ಡಿಲೀಟ್ ಮಾಡಿ ಹೊಸ ಮೊಬೈಲ್ ಖರೀದಿಸಿ ವಾಟ್ಸಾಪ್ ಇನ್ ಸ್ಟಾಲ್ ಮಾಡಿಕೊಂಡಿದ್ದಾರೆ. ವಾಟ್ಸಪ್ ಚಾಟ್ ಸಿಗದ್ದಂತೆ ಮಾಡಿದ್ದಾರೆ.


































































