ಕಾರ್ಕಳ : ಗ್ರಾಮೀಣ ಭಾಗದ ರಸ್ತೆ, ಸೇತುವೆ, ಕುಡಿಯುವ ನೀರು ಯೋಜನೆ, ವಿದ್ಯುದೀಕರಣ ಕಾರ್ಯಗಳು ಸಮರ್ಪಕವಾಗಿ ನಡೆದಾಗ ಮಾತ್ರ ಕಾರ್ಕಳ ಕ್ಷೇತ್ರದ ಸಮಗ್ರ ಅಭಿವೃದ್ದಿ ಸಾಧ್ಯ. ಸಾಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹಾಗೂ ವಿವಿಧ ಸ್ವಯಂ ಸೇವಾ ಸಂಘಟನೆಗಳು ಸಮನ್ವಯತೆಯಿಂದ ಒಂದು ತಂಡವಾಗಿ ಕೆಲಸ ಮಾಡುತ್ತಿರುವುದರಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಳ್ಳಲು ಅನುಕೂಲವಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.
ಅವರು ಸೆ. 6ರಂದು ಸಾಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು 4.3 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ಮತ್ತು ಹಲವು ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಶಾಸಕರ ಭರವಸೆ

ಸಾಣೂರಿನಿಂದ ನಿಟ್ಟೆ ಗ್ರಾಮಕ್ಕೆ ಸಂಪರ್ಕಿಸುವ ಮುದ್ದಣ್ಣ ನಗರ- ಪರಪ್ಪಾಡಿ, ಬಾರಾಡಿ ಸಂಪರ್ಕ ರಸ್ತೆ ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಸಾಣೂರು ಪಡ್ಡಾಯಿಗುಡ್ಡೆ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸರಕಾರದ ನೆರವು ಹಾಗೂ ಏನ್ರ್ನಡಕ ರಸ್ತೆ ಡಾಮರೀಕರಣಕ್ಕೆ ಅನುದಾನ ಕಲ್ಪಿಸುವುದಾಗಿ ಶಾಸಕರು ಭರವಸೆ ನೀಡಿದರು.
ಸಮ್ಮಾನ
ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯರಾದ ವೇ. ಶ್ರೀರಾಂ ಭಟ್ ಹಾಗೂ ಸುನಿಲ್ ಕೆ.ಆರ್., ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಸಾಣೂರು ನರಸಿಂಹ ಕಾಮತ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಮಿಯ್ಯಾರು ಜಿ.ಪಂ. ಸದಸ್ಯೆ ದಿವ್ಯಶ್ರೀ ಗಿರೀಶ್ ಅಮೀನ್, ಸಾಣೂರು ತಾ.ಪಂ. ಸದಸ್ಯ ಪ್ರವೀಣ್ ಕೋಟ್ಯಾನ್, ಸಾಣೂರು ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಕರುಣಾಕರ ಕೋಟ್ಯಾನ್, ರಾಜೇಶ್ವರಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಯುವರಾಜ್ ಜೈನ್, ಸಾಣೂರು ಬಿಜೆಪಿ ಪ್ರಮುಖರಾದ ವಿಶ್ವನಾಥ್ ಶೆಟ್ಟಿ, ದೇವಾನಂದ ಶೆಟ್ಟಿ, ಪ್ರಸಾದ್ ಪೂಜಾರಿ, ವಸಂತ ಕೆಂಚ ಬೆಟ್ಟು, ಭಾಸ್ಕರ್ ಭಟ್, ಪ್ರಭಾಕರ ಸನಿಲ್, ಶಕುಂತಲಾ, ಲತಾ ಶೆಟ್ಟಿಗಾರ್, ಶೈಲಜಾ, ಉದಯ್ ಅಂಚನ್, ಆನಂದ ಶೆಟ್ಟಿ, ರಾಕೇಶ್ ಅಮೀನ್, ಜಯಂತ, ಸಾಂತಿಂಜ ನರಸಿಂಹ ಭಟ್, ಕೃಷ್ಣ ಎಲ್. ಪೂಜಾರಿ, ವೆಂಕಟೇಶ್ ಕಾಮತ್, ವಾಸು ಶೆಟ್ಟಿ, ಸಾಧು ಮೊದಲಾದವರು ಉಪಸ್ಥಿತರಿದ್ದರು. ಸಾಣೂರು ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.































