ಸಾಣೂರು ಯುವಕ ಮಂಡಲ ಇದರ ಆಶ್ರಯದಲ್ಲಿ ಫಿಟ್ ಇಂಡಿಯಾ ಬೈಸಿಕಲ್ ಜಾಥಾ ಸರಣಿ ಕಾರ್ಯಕ್ರಮಕ್ಕೆ ಶಾಸಕ ವಿ. ಸುನಿಲ್ ಕುಮಾರ್ ಸೆ. 6ರಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವ್ಯಾಯಾಮದ ಜೊತೆಗೆ ನಿರಂತರವಾಗಿ ಸೈಕ್ಲಿಂಗ್ ಕೂಡ ಆರೋಗ್ಯ ಜೊತೆಗೆ ಮಾನಸಿಕ ಹಾಗೂ ಶಾರೀರಿಕವಾಗಿ ಸದೃಢವಾಗಲು ಸಹಕಾರಿ ಎಂದರು. ಕೆ.ಎಂ.ಎಫ್ ನಿರ್ದೇಶಕ ಸಾಣೂರು ನರಸಿಂಹ ಕಾಮತ್ ಮಾತನಾಡಿ, ಸದಾ ಚಟುವಟಿಕೆಯಿಂದಿರುವ ಯುವಕ ಮಂಡಲದ ತಂಡ ಫಿಟ್ ಇಂಡಿಯಾ ಬೈಸಿಕಲ್ ಜಾಥಾ ಮತ್ತು ಇತರ ಸರಣಿ ಕಾರ್ಯಕ್ರಮ ಆಯೋಜಿಸುವ ಮೂಲಕ ಮಾದರಿಯಾಗಿದೆ ಎಂದರು.
ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯೆ ದಿವ್ಯಶ್ರೀ ಗಿರೀಶ್ ಅಮೀನ್, ತಾ.ಪಂ. ಸದಸ್ಯ ಪ್ರವೀಣ್ ಕೋಟ್ಯಾನ್, ಯುವಕ ಮಂಡಲದ ಮಾಜಿ ಅಧ್ಯಕ್ಷರಾದ ಏಕನಾಥ್ ಪ್ರಭು, ಪ್ರವೀಣ್ ಶೆಟ್ಟಿ, ದೇವಾನಂದ ಶೆಟ್ಟಿ, ಮಹೇಶ್ ಕುಮಾರ್, ಜಗದೀಶ್ ಕುಮಾರ್, ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ್, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ರಘುರಾಮ ಶೆಟ್ಟಿ, ಅನಿಲ್ ರಾಜೇಶ್, ಶುಭಕರ್, ಹರೀಶ್, ರೋಹಿತ್, ಚಂದ್ರಹಾಸ್, ದಿಲೀಪ್, ಪ್ರಶಾಂತ್, ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು. ಯುವಕ ಮಂಡಲದ ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.































