ಕಾರ್ಕಳ : ಸಾಣೂರು ಯುವಕ ಮಂಡಲದ ಆಶ್ರಯದಲ್ಲಿ ಫಿಟ್ ಇಂಡಿಯಾ ಸರಣಿ ಕಾರ್ಯಕ್ರಮದಂಗವಾಗಿ ಸಾಣೂರು ಗ್ರಾಮದ ಯುವಕರಿಗಾಗಿ ಸೆ. 13ರಂದು ಯುವಕ ಮಂಡಲದ ಮೈದಾನದಲ್ಲಿ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ. ಜಿ.ಪಂ. ಸದಸ್ಯೆ ದಿವ್ಯಶ್ರೀ ಗಿರೀಶ್ ಅಮೀನ್, ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಭಾರ್ಗವಿ ಕನ್‌ಸ್ಟ್ರಕ್ಷನ್ ಸಾಣೂರುವಿನ ಭಾಸ್ಕರ್ ಪೂಜಾರಿ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಯುವಕ ಮಂಡಲದ ಕಾರ್ಯದರ್ಶಿ ಮೋಹನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















