ದಿಲ್ಲಿ, ಸೆ. 13:ಕೇಂದ್ರ ಗೃಹ ಸಚಿವ ಅಮಿತ್ ಶಾ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊರೊನಾ ಹಾವಳಿ ಶುರುವಾದ ಬಳಿಕ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಮೂರನೇ ಸಲ. ಆ.31ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಎಂದಿನ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಅಮಿತ್ ಶಾ ಅವರಿಗೆ ನಿನ್ನೆ ರಾತ್ರಿ ಮತ್ತೆ ಹಠಾತ್ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.



















