ದಿಲ್ಲಿ, ಸೆ.13: ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ (74) ಅನಾರೋಗ್ಯದಿಂದಾಗಿ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೊರೊನಾದಿಂದ ಚೇತರಿಸಿಕೊಂಡಿದ್ದ ರಘುವಂಶ್ ಪ್ರಸಾದ್ ಸಿಂಗ್‌ಗೆ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು.ಅವರ ಅಂತ್ಯಕ್ರಿಯೆ ಪಾಟ್ನಾದಲ್ಲಿ ನಡೆಯಲಿದೆ.
ಜೂನ್‌ನಲ್ಲಿ ರಘುವಂಶ್ ಪ್ರಸಾದ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅನಂತರ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಉಂಟಾಗಿತ್ತು.
ರಾಷ್ಟ್ರೀಯ ಜನತಾ ದಳದ ನಾಯಕರಾಗಿದ್ದ ರಘುವಂಶ್ ಪ್ರಸಾದ್ ಸಿಂಗ್ ಲಾಲೂ ಪ್ರಸಾದ್ ಯಾದವ್ ಅವರ ಪರಮಾಪ್ತರಾಗಿದ್ದರು. ಆದರೆ ಇತ್ತೀಚೆಗೆ ಅವರು ಆರ್ ಜೆಡಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ನಾಯಕರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರದ ನರೇಗ ಯೋಜನೆಯ ರೂವಾರಿ ಎಂಬುದಾಗಿ ರಘುವಂಶ್ ಪ್ರಸಾದ್ ಸಿಂಗ್ ಬಹುಕಾಲ ನೆನಪಿನಲ್ಲಿ ಉಳಿಯುತ್ತಾರೆ.



















