ಕಾರ್ಕಳ : ಶಿಕ್ಷಕರ ದಿನಾಚರಣೆಯಂಗವಾಗಿ ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ಶೈಕ್ಷಣಿಕ ಕ್ಷೇತ್ರದ ಸಾಧಕರಾದ ಎಸ್.ವಿ.ಟಿ. ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ, ಪರಪ್ಪಾಡಿ ಶಾಲಾ ಶಿಕ್ಷಕಿ ಪೂರ್ಣಿಮಾ ಶೆಣೈ, ನಲ್ಲೂರು ಶಾಲಾ ಶಿಕ್ಷಕ ನಾಗೇಶ್ ನಲ್ಲೂರು, ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ವಂದನಾ ರೈ ಅವರನ್ನು ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷೆ ರೇಖಾ ಉಪಾಧ್ಯಾಯ, ಕಾರ್ಯದರ್ಶಿ ಶಶಿಕಲಾ ಕೆ. ಹೆಗ್ಡೆ, ಆನ್ಸ್ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್, ವಿಜಯರಾಜ್ ಶೆಟ್ಟಿ, ನಿರಂಜನ್ ಜೈನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರೋಟರಿ ವತಿಯಿಂದ ಸಾಧಕ ಶಿಕ್ಷಕರಿಗೆ ಸನ್ಮಾನ





















